ಕಾವೇರಿ ಜಲವಿವಾದದ ವಿಚಾರದಲ್ಲಿ ನಾವು ಸರ್ಕಾರ ತೆಗೆದುಕೊಳ್ಳುವ ತೀರ್ಮಾನದ ಪರವಾಗಿರುತ್ತೇವೆ: ಬಿ.ಎಸ್.ಯಡಿಯೂರಪ್ಪ

 

ಬೆಂಗಳೂರು, ಜೂ.30-ಕಾವೇರಿ ಜಲವಿವಾದದ ವಿಚಾರದಲ್ಲಿ ನಾವು ಸರ್ಕಾರ ತೆಗೆದುಕೊಳ್ಳುವ ತೀರ್ಮಾನದ ಪರವಾಗಿರುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಸರ್ವಪಕ್ಷ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲವಿವಾದದ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದೇವೆ. ನೆಲ,ಜಲ, ಭಾಷೆ ವಿಷಯದಲ್ಲಿ ಸರ್ಕಾರದ ಪರವಾಗಿರುತ್ತೇವೆ ಎಂದು ಹೇಳಿದರು.
ರೈತರ ಹಿತ ಕಾಪಾಡಲು ನಾವು ಬದ್ಧರಾಗಿದ್ದೇವೆ. ರೈತರಿಗಾಗಿಯೇ ನಾವು ಹಿಂದೆಯೂ ಹೋರಾಟ ಮಾಡಿದ್ದೆವು. ಈಗ ಸರ್ಕಾರ ರೈತರ ಹಿತಕ್ಕಾಗಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸುತ್ತೇವೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ