ವಿಧಾನಸೌಧ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ವ್ಯಕ್ತಿ ಯತ್ನ

 

ಬೆಂಗಳೂರು, ಜೂ.30-ವ್ಯಕ್ತಿಯೊಬ್ಬರು ವಿಧಾನಸೌಧ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜಾಲಹಳ್ಳಿ ಗ್ರಾಮದ ನಿವಾಸಿ ಗಂಗಾಧರ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.
ಇಂದು ಬೆಳಗ್ಗೆ ವಿಧಾನಸೌಧದ ಗೇಟ್ ನಂ.2 ಬಳಿ ಬಂದ ಗಂಗಾಧರ್ ನನಗೆ ಸಾಲಗಾರರ ಕಾಟ ಜಾಸ್ತಿಯಾಗಿದೆ. ಬೆಂಗಳೂರಿನ ಶಿವಪ್ಪ ಎಂಬುವವರಿಂದ ನನಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ.
ನಂತರ ನನಗೆ ನ್ಯಾಯ ಕೊಡಿಸಬೇಕೆಂದು ದ್ವಾರದ ಮುಂದೆ ಕೂಗಾಡುತ್ತಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ತಕ್ಷಣ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವಿಧಾನಸೌಧ ಠಾಣೆ ಪೆÇಲೀಸರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ