ಮೊಬೈಲ್ ಕಳ್ಳರ ಬಂಧನ

ತುಮಕೂರು, ಜೂ.30-ಮನೆಗಳವು ಹಾಗೂ ಮೊಬೈಲ್ ಕಳ್ಳರನ್ನು ಬಂಧಿಸಿ ಅವರಿಂದ 320 ಗ್ರಾಂ ಚಿನ್ನಾಭರಣ, 250 ಗ್ರಾಂ ಬೆಳ್ಳಿ ಆಭರಣ ಹಾಗೂ 100 ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ದಿವ್ಯಾಗೋಪಿನಾಥ್ ತಿಳಿಸಿದರು.
ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ತಿಲಕ್‍ಪಾರ್ಕ್ ವೃತ್ತದ ಜಯನಗರದ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆಗಳವು ಪ್ರಕರಣ ಭೇದಿಸಲಾಗಿದ್ದು, ಇದರ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ.
ನಗರದ ಎನ್.ಆರ್.ಕಾಲೋನಿ ನಿವಾಸಿಗಳಾದ ಮಂಜು, ಸತೀಶ್ ಬಂಧಿತ ಆರೋಪಿಗಳು.
ಸಬ್‍ಇನ್ಸ್‍ಪೆಕ್ಟರ್ ನವೀನ್‍ಕುಮಾರ್,ಪಿಎಸ್‍ಐಗಳಾದ ಸೈಮನ್, ಮುನ್ನಾ, ಲೋಕೇಶ್, ರಾಮಚಂದ್ರ ಪ್ರಕರಣದ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳ್ಳಾವಿ, ತಿಲಕ್ ಪಾರ್ಕ್ ಮತ್ತು ಜಯನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಕಳವು ಮಾಡುತ್ತಿದ್ದ ಮಂಜು ಎಂಬಾತನನ್ನು ಬಂಧಿಸಿ 100 ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.
ಕೋರಾ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸಲಾಗಿದ್ದು, ನಿಗೂಢವಾಗಿದ್ದ ಈ ಪ್ರಕರಣವನ್ನು ಭೇದಿಸುವಲ್ಲಿ ವೃತ್ತ ನಿರೀಕ್ಷಕ ಮಧುಸೂದನ್, ಸಬ್‍ಇನ್ಸ್‍ಪೆಕ್ಟರ್‍ಗಳಾದ ರಾಜು, ರವಿಕುಮಾರ್, ಡಿವೈಎಸ್ಪಿ ನಾಗರಾಜ್ ತಂಡ ಯಶಸ್ವಿಯಾಗಿದೆ ಎಂದರು. ಸುದ್ದಿಗೊಷ್ಠಿಯಲ್ಲಿ ಎಸ್‍ಪಿ ಶೋಭಾರಾಣಿ, ನಾಗರಾಜ್, ವೃತ್ತನಿರೀಕ್ಷಕ ರಾಧಾಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ