ಅಪರೂಪದ ಹಕ್ಕಿಗಳನ್ನು ಬೇಟೆಯಾಡುತ್ತಿದ್ದವರ ಬಂಧನ

ಚಿಕ್ಕಮಗಳೂರು, ಜೂ.30-ಅಪರೂಪದ ಹಕ್ಕಿಗಳನ್ನು ಬೇಟೆಯಾಡಿ ಹೊಟೇಲ್‍ಗಳಿಗೆ ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 40ಕ್ಕೂ ಹೆಚ್ಚು ಹಕ್ಕಿಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಭು ಮತ್ತು ಶ್ರೀನಿವಾಸ್ ಬಂಧಿತ ಆರೋಪಿಗಳು. ಜಿಲ್ಲೆಯ ಕಾಮೇನಹಳ್ಳಿ ಅರಣ್ಯ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅರಣ್ಯ ಇಲಾಖೆ ಅಧಿಕಾರಿಗಳಾದ ಇವರು, ಅಪರೂಪದ ಹಕ್ಕಿಗಳನ್ನು ಅಕ್ರಮವಾಗಿ ಬೇಟೆಯಾಡುತ್ತಿದ್ದ ಈ ಇಬ್ಬರು ಹೊಟೇಲ್‍ಗಳಿಗೆ ತಾವು ಬೇಟೆಯಾಡಿದ ಹಕ್ಕಿಗಳನ್ನು ಸರಬರಾಜು ಮಾಡುತ್ತಿದ್ದರು. ಇವರನ್ನು ಬಂಧಿಸಿರುವ ಸ್ಥಳೀಯ ಪೆÇಲೀಸರು ಗೀಜಗ, ಮೈನಾ ಸೇರಿದಂತೆ ಇನ್ನಿತರ ಅಪರೂಪದ 40ಕ್ಕೂ ಹೆಚ್ಚು ಹಕ್ಕಿಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ