ಅಪಘಾತದಲ್ಲಿ ಯುವಕನ ಸಾವು

ಮಂಡ್ಯ,ಜೂ.30- ಅತಿವೇಗವಾಗಿ ಮುನ್ನುಗಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಶ್ರೀರಂಗಪಟ್ಟಣ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಮನು(28) ಮೃತಪಟ್ಟ ಯುವಕ. ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರು ಗ್ರಾಮದ ಬೆಂಗಳೂರು-ಮೈಸೂರು ಹೆದ್ದಾರಿ ಬಳಿ ಅತಿವೇಗವಾಗಿ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಗ್ರಾಮಾಂತರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ