
ಕಲಬುರಗಿ, ಜೂ.30- ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಹರಕಂಚಿ ಗ್ರಾಮದ ರಫೀಕ್ ಪಾಷ (28) ಮೃತ ದುರ್ದೈವಿ. ಕ್ರೂಸರ್ ಚಾಲಕನಾಗಿರುವ ಈತ ರಸ್ತೆಯಲ್ಲಿ ಬಿದ್ದಿದ್ದ ಕಟೌಟ್ ಸರಿಪಡಿಸಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಕಲಬುರಗಿಯ ಟಿವಿ ಸ್ಟೇಷನ್ ಎದುರು ರಸ್ತೆಯಲ್ಲಿ ಬಿದ್ದಿದ್ದ ಕಟೌಟ್ ತೆರವುಗೊಳಿಸಲು ಹೋದಾಗ ವಿದ್ಯುತ್ ಸ್ಪರ್ಶಗೊಂಡು ರಫೀಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಗ್ರಾಮಾಂತರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.