ಕಳ್ಳತನಕ್ಕೆ ಯತ್ನಿಸಿದ ಕಳ್ಳನನ್ನು ಹಿಡಿದ ಗ್ರಾಮಸ್ಥರು

ಚನ್ನಪಟ್ಟಣ, ಜೂ.30- ಒಂಟಿ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಕಳ್ಳನನ್ನು ಗ್ರಾಮಸ್ಥರೇ ಹಿಡಿದು ಕಂಬಕ್ಕೆ ಕಟ್ಟಿ ಪೆÇಲೀಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ಗೋವಿಂದೇಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಮೂಲತಃ ಯಡಿಯೂರು ಬಳಿಯ ಎಡೇನಹಳ್ಳಿಯ ನವೀನ್ ಕೆಂಗೇರಿ ಬಳಿ ವಾಸವಾಗಿದ್ದು, ನಿನ್ನೆ ದ್ವಿಚಕ್ರ ವಾಹನದಲ್ಲಿ ಗ್ರಾಮಕ್ಕೆ ಬಂದಿದ್ದಾನೆ. ಗ್ರಾಮದಲ್ಲಿ ಬೀಗ ಹಾಕಿದ್ದ ಪುಟ್ಟೇಗೌಡರ ಒಂಟಿ ಮನೆಯ ಬಾಗಿಲನ್ನು ತನ್ನ ಕೈಚಳಕದಿಂದ ತೆಗೆದು, ಒಳಗೆ ಪ್ರವೇಶಿಸಿದ್ದು, ಈ ವೇಳೆ ಮನೆ ಬಳಿ ಬಂದ ಪುಟ್ಟೇಗೌಡರ ಅಳಿಯ ಕಳ್ಳನನ್ನು ಹಿಡಿಯಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಜಗಳ ನಡೆದಿದ್ದು, ಗ್ರಾಮಸ್ಥರು ಸ್ಥಳಕ್ಕೆ ಬಂದು ಕಳ್ಳನನ್ನು ಹಿಡಿದು ಕಂಬಕ್ಕೆ ಕಟ್ಟಿದ್ದಾರೆ. ಬಳಿಕ ಗ್ರಾಮಾಂತರ ಪೆÇಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೆÇಲೀಸರು ಕಳ್ಳನನ್ನು ವಶಕ್ಕೆ ಪಡೆದಿದ್ದಾರೆ. ಕಳ್ಳನ ಬಳಿ ಮಹಿಳೆಯರ ಐದಾರು ಪರ್ಸ್‍ಗಳು ಸಿಕ್ಕಿವೆ ಎಂದು ಹೇಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ