ಮಾದಕ ವಸ್ತು ಮಾರಾಟ ಜಾಲಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೆÇಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರನ್ನು ಬಂಧನ

 

ಬೆಂಗಳೂರು, ಜು.1-ಮಾದಕ ವಸ್ತು ಮಾರಾಟ ಜಾಲಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೆÇಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರನ್ನು ಬಂಧಿಸಿದ್ದಾರೆ.
ಮಹದೇವಪುರ ಠಾಣೆ ವ್ಯಾಪ್ತಿಯ ರೈಲು ನಿಲ್ದಾಣದ ಎದುರಿನ ರಸ್ತೆಯ ಫುಟ್‍ಪಾತ್ ಮೇಲೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮಹಮ್ಮದ್ ತಂಜಿಲ್(38) ಎಂಬಾತನನ್ನು ಬಂಧಿಸಿ, ಆತನಿಂದ 1.200ಕೆಜಿ ತೂಕದ ಗಾಂಜಾ, ಮೊಬೈಲ್ ಹಾಗೂ ಹಣವನ್ನು ಸಿಸಿಬಿ ಪೆÇಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿ ವ್ಯವಸ್ಥಿತವಾಗಿ ಗಾಂಜಾ ಖರೀದಿ ಮಾಡಿ ಸಂಗ್ರಹಿಸಿಟ್ಟುಕೊಂಡು ಅವುಗಳನ್ನು ಚಿಕ್ಕ ಚಿಕ್ಕ ಪ್ಯಾಕೆಟ್ ಮಾಡಿ ವಿವಿಧೆಡೆ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೆÇಲೀಸರು ಸ್ಥಳಕ್ಕೆ ತೆರಳಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಮತ್ತೊಬ್ಬನಿಗಾಗಿ ಶೋಧ ಮುಂದುವರೆದಿದೆ.

ಮತ್ತೊಂದು ಪ್ರಕರಣದಲ್ಲಿ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯ ಮಾನ್ವಿತಾ ಕಾಂಡಿಮೆಂಟ್ ಮತ್ತು ಜ್ಯೂಸ್ ಸೆಂಟರ್ ಬಳಿ ಮಾದಕ ವಸ್ತು ಗಾಂಜಾವನ್ನು ಮಾಡುತ್ತಿದ್ದ ಅಹಮ್ಮದ್ ಪಾಷ(37), ಮುಬಾರಕ್(25) ಎಂಬುವರನ್ನು ಬಂಧಿಸಿ ಇವರಿಂದ 1 ಕೆಜಿ 250 ಗ್ರಾಂ ತೂಕದ ಗಾಂಜಾ ಹಾಗೂ 2 ಮೊಬೈಲ್, ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಬೇರೆಡೆಯಿಂದ ಗಾಂಜಾ ತಂದು ಪರಿಚಿತರಿಗೆ ಪ್ಯಾಕೆಟ್‍ಗಳಲ್ಲಿ ತುಂಬಿ ಮಾರಾಟ ಮಾಡುತ್ತಿದ್ದರು ಎಂದು ಹೇಳಲಾಗಿದೆ.
ಈ ಸಂಬಂಧ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಹಾಯಕ ಪೆÇಲೀಸ್ ಆಯುಕ್ತ ವೆಂಕಟೇಶ್ ಪ್ರಸನ್ನ ಅವರ ಮಾರ್ಗದರ್ಶನದಲ್ಲಿ ಇನ್ಸ್‍ಪೆಕ್ಟರ್‍ಗಳಾದ ಮಂಜುನಾಥ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ