
ತುಮಕೂರು, ಜು.1- ಅಪ್ರಾಪ್ತ ಬಾಲಕ-ಬಾಲಕಿಯರು ಸಂಚಾರಿ ನಿಯಮ ಉಲ್ಲಂಘಿಸಿ ವಾಹನಗಳನ್ನು ಚಾಲನೆ ಮಾಡುವುದು ಕಂಡು ಬರುತ್ತಿದ್ದು , ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಜಿಲ್ಲಾ ಪೆÇಲೀಸರು ತಿಳಿಸಿದ್ದಾರೆ. ವಾಹನ ನೀಡುವ ಪೆÇೀಷಕರ ವಿರುದ್ಧವೂ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ. ಇಂದು ವಿಶೇಷ ಕಾರ್ಯಾಚರಣೆ ನಡೆಸಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ವಾಹನ ಓಡಿಸುವುದನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ತುಮಕೂರು ಗ್ರಾಮಾಂತರ ಪೆÇಲೀಸ್ ಠಾಣೆ ಪಕ್ಕದಲ್ಲಿರುವ ಚಿಲುಮೆ ಸಮುದಾಯ ಆವರಣದಲ್ಲಿ ನೂರಕ್ಕೂ ಹೆಚ್ಚು ಬೈಕ್‍ಗಳನ್ನು ಇಂದು ವಶಕ್ಕೆ ಪಡೆಯಲಾಗಿದೆ.
ವಾಹನದ ವಿಮೆ, ಮೂಲ ದಾಖಲೆಗಳು, ಚಾಲನಾ ಪ್ರಮಾಣ ಪತ್ರ ಸೇರಿದಂತೆ ಇತರೆ ದಾಖಲೆಗಳನ್ನು ಪರಿಶೀಲಿಸಲಾಗಿದೆ. ದ್ವಿಚಕ್ರ ವಾಹನಗಳನ್ನು ಅತಿ ವೇಗವಾಗಿ ಓಡಿಸುವುದರಿಂದ ಅಪಘಾತಗಳು ನಡೆಯುತ್ತಿದ್ದು, ಅಮಾಯಕ ಜೀವಗಳು ಬಲಿಯಾಗುತ್ತಿವೆ. ಇದಲ್ಲದೆ ಅಡ್ಡಾದಿಡ್ಡಿ ವಾಹನ ಚಲಿಸುವುದರಿಂದ ಇತರೆ ವಾಹನ ಸವಾರರಿಗೂ ತೊಂದರೆಯಾಗುತ್ತಿದೆ. ಇದನ್ನು ಮನಗಂಡು ಪೆÇೀಷಕರಿಗೆ ಎಚ್ಚರಿಕೆ ನೀಡಿ ಮುಂದೆ ಹೀಗೆ ಮಾಡದಂತೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿ ಹೇಳುವಂತಹ ಕಾರ್ಯಕ್ರಮವನ್ನು ಮಾಡಿದ್ದೇವೆ ಎಂದು ವೃತ್ತ ನಿರೀಕ್ಷಕ ಚಂದ್ರಶೇಖರ್ ತಿಳಿಸಿದರು.