
ದಾವಣಗೆರೆ,ಜು.1-ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಅಸ್ಥಿರತೆ ಇಲ್ಲ. ಸರ್ಕಾರ ಪೂರ್ಣಾವಧಿ ಪೂರೈಸಲಿದೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಭಿನ್ನಮತವಿಲ್ಲ. ನಾವೆಲ್ಲರು ಒಗ್ಗಟ್ಟಾಗಿದ್ದೇವೆ. ಐದು ವರ್ಷ ಆಡಳಿತ ನಡೆಸುವುದು ಗ್ಯಾರಂಟಿ ಎಂದರು.
ಸಂಪುಟ ವಿಸ್ತರಣೆ ಸಂಬಂಧ ಜೆಡಿಎಸ್ನಲ್ಲಿ ಯಾವುದೇ ಗೊಂದಲವಿಲ್ಲ. ಕಾಂಗ್ರೆಸ್ನಲ್ಲಿ ಗೊಂದಲವಿರಬಹುದು. ಅದು ಶೀಘ್ರ ಬಗೆಹರಿಯಲಿದೆ. ಯಾವುದೇ ಅನುಮಾನ ಬೇಡ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸಲಿದೆ ಎಂದು ಹೇಳಿದರು. ಕುಮಾರಸ್ವಾಮಿ ಅವರು ಜು.5ರಂದು ಬಜೆಟ್ ಮಂಡಿಸಲಿದ್ದಾರೆ. ಈ ರಾಜ್ಯದ ರೈತರ ಸಾಲಮನ್ನಾ ಆಗಲಿದೆ. ಪ್ರತಿಪಕ್ಷಗಳ ಟೀಕೆಗೆ ತಕ್ಕ ಉತ್ತರ ಸಿಗಲಿದೆ ಎಂದರು.