ಬೆಂಗಳೂರು,ಜು.2- ಸರ್ಕಾರದ ಎಲ್ಲಾ ಇಲಾಖೆಗಳ ಸೇವೆಗಳನ್ನು ಒಂದೇ ಮೊಬೈಲ್ ವೇದಿಕೆಯಲ್ಲಿ ಒದಗಿಸಲು ಅನುಕೂಲವಾಗುವಂತೆ ಏಕೀಕೃತ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲ ಹೇಳಿದ್ದಾರೆ.
ವಿಧಾನಸಭೆ, ವಿಧಾನಪರಿಷತ್ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರದಲ್ಲಿ ಮೊದಲ ಬಾರಿಗೆ ಏಕೀಕೃತ ಮೊಬೈಲ್ ವೇದಿಕೆಯನ್ನು ರೂಪಿಸಲಾಗಿದೆ. ನಾಡಕಛೇರಿ ಮತ್ತು ಪ್ರಾದೇಶಿಕ ಸಾರಿಗೆ ಕಛೇರಿ ಸೇವೆಗಳಿಗೆ ಡಿಜಿಟಲ್ ಲಾಕರ್ಗಳನ್ನುಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದರು.
ಮಾಹಿತಿಯನ್ನು ಒದಗಿಸಲು ವಿಶ್ವಾಸಾರ್ಹವಾದ ರಾಜ್ಯ ವಿಸ್ತೃತ ಪ್ರದೇಶ ಸಂಪರ್ಕ(ಕೆಸ್ವಾನ್) ಜಾಲವನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ರಾಜ್ಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸರ್ಕಾರಿ ಕಚೇರಿಗಳನ್ನು ಸಂಪರ್ಕಿಸಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ವಿಡಿಯೋ ಸಮಾವೇಶಗಳ ಸೌಲಭ್ಯ ಕಲ್ಪಿಸಲಾಗಿದೆ ಎಂದು ಅವರು ವಿವರಿಸಿದರು.
Governor Vajubhai Vala,Joint Session,Karnataka Legislative Assembly