ಹುಬ್ಬಳ್ಳಿ- ಹುಬ್ಬಳ್ಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಯ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ಎಸಿಬಿ ದಾಳಿ ನಡೆದಿದೆ. ವಲಯ ಅರಣ್ಯಾಧಿಕಾರಿ ಸಿ.ಎಚ್. ಮಾವಿನತೋಪು ಎಂಬುವರ ಮನೆಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯ ಮೃತ್ಯುಂಜಯ ನಗರದಲ್ಲಿರುವ ನಿವಾಸದ ಮೇಲೆ ಎಸಿಬಿ ಡಿವೈಎಸ್ಪಿ ವಿಜಯಕುಮಾರ್ ಬಿಸನಳ್ಳಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲಾತಿಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ಹಾಗೂ ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆ ಎಸಿಬಿ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ದಾಖಲೆಗಳನ್ನು ವಶಕ್ಕೆ ಪಡೆದ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.