ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ತೀವ್ರ ಅಸ್ವಸ್ಥ: ಬಿಜಿಎಸ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಕುಮಾರ್ ತೀವ್ರ ಅಸ್ವಸ್ಥಗೊಂಡಿದ್ದು, ನಗರದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಒಂದು ವಾರದಿಂದ ಧನಂಜಯ್ ಕುಮಾರ್ ತೀವ್ರವಾಗಿ ಅನಾರೋಗ್ಯ ಪೀಡಿತರಾಗಿದ್ದು ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸದ್ಯ ಧನಂಜಯ್ ಕುಮಾರ್ ಕೋಮಾ ಸ್ಥಿತಿಯಲ್ಲಿದ್ದಾರೆ ಎಂಬ ಮಾಹಿತಿ ದೊರೆತಿದೆ. ಒಂದು ವಾರದಿಂದ ವೈದ್ಯರು ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್​ಗೆ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದಲ್ಲಿ ನಿರೀಕ್ಷಿತ ಸುಧಾರಣೆ ಕಂಡು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ