ಹೊಸದಿಲ್ಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರು. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿದೆ.
ವಂಚನೆ ಪ್ರಕರಣ ನಂತರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನೀರವ್ ಮೋದಿಗೆ ರೆಡ್ ಕಾರ್ನರ್ ನೋಟಿಸ್ ನೀಡುವಂತೆ ಸಿಬಿಐ ಇಂಟರ್ ಪೋಲ್ ಗೆ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ನೀರವ್ ಮೋದಿ ವಿರುದ್ಧ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ನೀಡಿದ್ದು ಯಾವುದೇ ದೇಶದಲ್ಲಿದ್ದರೂ ಬಂಧಿಸುವ ಸಾಧ್ಯತೆ ಇದೆ.
13 ಸಾವಿರ ಕೋಟಿ ರುಪಾಯಿ ವಂಚನೆಗೆ ಸಂಬಂಧಿಸಿದಂತ ನೀರವ್ ಮೋದಿ ಹಾಗೂ ಅವರ ಅಂಕಲ್, ಗೀತಾಂಜಲಿ ಜೆಮ್ಸ್ ನ ಮೆಹುಲ್ ಚೋಕ್ಸಿ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ನಾಲ್ಕು ಬಾರಿ ಸಮನ್ಸ್ ನೀಡಿದರೂ ಆರೋಪಿಗಳಿಂದ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ಈಗ ರೆಡ್ ಕಾರ್ನರ್ ನೋಟಿಸ್ ನೀಡಲಾಗಿದೆ.