ಭೀಕರ ರಸ್ತೆ ಅಪಘಾತದಲ್ಲಿ ಮೂವರ ಸಾವು

ಚಿತ್ರದುರ್ಗ, ಜು.2- ಕಂಟೈನರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಾಡನಾಯಕನಹಳ್ಳಿ ಬಳಿ ಕಳೆದ ರಾತ್ರಿ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊರಮ ಘಟ್ಟ ಗ್ರಾಮದ ನಿವಾಸಿಗಳಾದ ನೆವಿಲ್ (26), ಮಂದಾರ (20), ರುಕ್ಮಿಣಿ (19) ಮೃತಪಟ್ಟ ದುರ್ದೈವಿಗಳು.
ಮುದೋಳದಲ್ಲಿ ನಡೆದಿದ್ದ ಸಂಬಂಧಿಕರ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಮುಂದೆ ಚಲಿಸುತ್ತಿದ್ದ ಕಂಟೈನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ
ಸಾವನ್ನಪ್ಪಿದರೆ , ಮಹೇಂದ್ರ ಮತ್ತು ಮನೋಹರ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು , ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪಿಎಸ್‍ಐ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜು ಗುಜ್ಜಾಗಿದ್ದು , ಪೆÇಲೀಸರು ಹರಸಾಹಸ ಪಟ್ಟು ಶವಗಳನ್ನು ಹೊರ ತೆಗೆಯಲಾಯಿತು. ಈ ಸಂಬಂಧ ತುರುವನೂರು ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ