ರೈತನನ್ನು ಸಾಲದ ಸುಳಿಯಿಂದ ಹೊರತಂದು ಆಧುನಿಕ ಕೃಷಿ ತಂತ್ರಜ್ಞಾನಕ್ಕೆ ಸಜ್ಜುಗೊಳಿಸುವುದು ಸಮ್ಮಿಶ್ರ ಸರ್ಕಾರದ ಉದ್ದೇಶ: ರಾಜ್ಯಪಾಲರು

 

ಬೆಂಗಳೂರು, ಜು.2-ಸರ್ವರಿಗೂ ಶಿಕ್ಷಣ, ಆರೋಗ್ಯ, ವಸತಿ ನೀಡುವುದು ಆದ್ಯತೆಯಾಗಿದ್ದು, ಅನ್ನದಾತ ರೈತನನ್ನು ಸಾಲದ ಸುಳಿಯಿಂದ ಹೊರತಂದು ಆಧುನಿಕ ಕೃಷಿ ತಂತ್ರಜ್ಞಾನ ಆಧಾರಿತ ಬಳಕೆಗೆ ಸಜ್ಜುಗೊಳಿಸುವುದೂ ಸೇರಿದಂತೆ ಪ್ರತಿಯೊಬ್ಬ ನಾಗರಿಕರ ಹಿತ ಕಾಪಾಡುವ ಹೊಸ ದೃಷ್ಟಿ, ಹೊಸ ದಾರಿಯಲ್ಲಿ ಸಮ್ಮಿಶ್ರ ಸರ್ಕಾರ ಹೆಜ್ಜೆ ಇಡಲಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಪ್ರಕಟಿಸಿದರು.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನವಾದ ಇಂದು ವಿಧಾನಸಭೆಯಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಶಿಕ್ಷಣವೇ ಶಕ್ತಿ ಎಂಬುದರ ಅರಿವು ಸರ್ಕಾರಕ್ಕಿದ್ದು, ಶಿಕ್ಷಣದಲ್ಲಿ ಕೌಶಲ್ಯ ಸಹಿತ ವೃತ್ತಿ ತರಬೇತಿಯನ್ನು ಕಡ್ಡಾಯಗೊಳಿಸಲು ಚಿಂತಿಸಲಾಗಿದೆ ಎಂದರು.

ಸಮಾಜದ ಎಲ್ಲಾ ವರ್ಗದ ಅವಕಾಶ ವಂಚಿತರು, ಹಿಂದುಳಿದವರು, ಮಹಿಳೆಯರು, ಯುವ ಜನಾಂಗ ಹಾಗೂ ರೈತರ ಕಲ್ಯಾಣಕ್ಕೆ ಕಂಕಣಬದ್ಧವಾಗಿದ್ದು, ಹಳ್ಳಿ ಮತ್ತು ಪಟ್ಟಣದ ಅಭಿವೃದ್ಧಿಗೆ ಸರಿಸಮಾನವಾದ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು.
ವಿಧಾನಸಭೆಗೆ ಹಲವು ಶಾಸಕರು ಮೊದಲ ಬಾರಿಗೆ ಪ್ರವೇಶ ಪಡೆದಿದ್ದಾರೆ. ಅನುಭವಿಗಳ ಜ್ಞಾನ ಹೊಸ ಸದಸ್ಯರಿಗೆ ಮಾರ್ಗಸೂಚಿಯಾಗಲಿ ಎಂದು ಹಾರೈಸಿದರು.

ಸರ್ಕಾರದ ಅಭಿವೃದ್ಧಿ ಯೋಜನೆಯ ಪ್ರಯೋಜನಗಳು ಪ್ರತಿಯೊಬ್ಬ ನಾಗರಿಕರಿಗೆ ತಲುಪುವಂತೆ ಹಾಗೂ ಸರ್ವರ ವಿಕಾಸವನ್ನು ಸಾಧಿಸುವ ಗುರಿ ಹೊಂದಿದ್ದು, ತೃಪ್ತಿಕರವಾದ ರೀತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಬರಲಾಗುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಪೆÇಲೀಸ್ ತರಬೇತಿ ಸಾಮಥ್ರ್ಯವನ್ನು ಹೆಚ್ಚಿಸಲಾಗುವುದು.
ಮುಂದಿನ ಐದು ವರ್ಷಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಲಾಗುತ್ತದೆ. ಎಲ್ಲಾ ಪೆÇಲೀಸ್ ಆಯುಕ್ತರ ಕಚೇರಿಗಳಲ್ಲಿ ನಿರ್ಭಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಎಲ್ಲಾ ಪೆÇಲೀಸ್ ಠಾಣೆ ಹಾಗೂ ಕಚೇರಿಗಳಲ್ಲಿ ಮಹಿಳೆಯರಿಗೆ ಶೌಚಾಲಯ ನಿರ್ಮಾಣ ಮಾಡುವುದರ ಜತೆಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲಾಗುವುದು.

ಹಾಲಿನ ಉತ್ಪಾದನೆಯಲ್ಲಿ ದೇಶದಲ್ಲಿ ಎರಡನೇ ಸ್ಥಾನ ಹಾಗೂ ಕೋಳಿ ಮೊಟ್ಟೆ ಉತ್ಪಾದನೆಯಲ್ಲಿ ಏಳನೆ ಸ್ಥಾನವನ್ನು, ಮಾಂಸ ಉತ್ಪಾದನೆಯಲ್ಲಿ 11ನೇ ಸ್ಥಾನವನ್ನು ರಾಜ್ಯ ಹೊಂದಿದ್ದು, ಸದ್ಯದಲ್ಲಿಯೇ ರಾಜ್ಯ ಮೇವು ಭದ್ರತಾ ನೀತಿಯನ್ನು ರೂಪಿಸಲಿದೆ ಎಂದು ರಾಜ್ಯಪಾಲರು ಪ್ರಕಟಿಸಿದರು.
ಚರ್ಮ ಸಂಸ್ಕರಣೆ ಮತ್ತು ಹದ ಮಾಡುವ ಕೇಂದ್ರವನ್ನು ಸ್ಥಾಪನೆ ಮಾಡಲಾಗುವುದು. ಕೆರೆಗಳನ್ನು ತುಂಬಿಸುವ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಿ, ಕಾಲುವೆಗಳಲ್ಲಿ ನೀರಿನ ಹರಿವನ್ನು ಮಾಪನ ಮಾಡಲು ಎಸ್‍ಸಿಎಡಿಎ ತಂತ್ರಜ್ಞಾನವನ್ನು ಅಳವಡಿಸಲಾಗುವುದು. ರಾಜ್ಯದಲ್ಲಿ 1,101 ಚ.ಕಿ.ಮೀ. ಅರಣ್ಯ ವ್ಯಾಪ್ತಿ ವಿಸ್ತರಣೆಯಾಗಿದ್ದು, ಹುಲಿ, ಆನೆ, ಚಿರತೆ, ಸಿಂಗಲೀಕಗಳ ಸಂಖ್ಯೆಯ ವಿಷಯದಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ ಎಂದು ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯವನ್ನು ರಾಷ್ಟ್ರದಲ್ಲಿಯೇ ಒಂದು ಮಾದರಿ ರಾಜ್ಯವನ್ನಾಗಿ ಮಾಡಲು ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು. ಸರ್ಕಾರದ ಯೋಜನೆಗಳನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಲು ಹಾಗೂ ಜನರಿಗೆ ತಲುಪಿಸಲು ಜನಪ್ರತಿನಿಧಿಗಳ ಸಹಕಾರ ಅಗತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಕಾರ್ಯ ನಿರ್ವಹಿಸಿ ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ದೊರಕಿಸೋಣ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ