
ಗಾಂಧಿನಗರ: ಗುಜರಾತ್ ಹಿರಿಯ ಕಾಂಗ್ರೆಸ್ ಶಾಸಕ, ಕೋಲಿ ಸಮುದಾಯದ ಪ್ರಮುಖ ನಾಯಕ ಕುನ್ವರ್ಜಿ ಬವಾಲಿಯಾ ಅವರು ಮಂಗಳವಾರ ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ರಾಜಕೋಟ್ ಜಿಲ್ಲೆಯ ಜಸ್ಡನ್ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬವಾಲಿಯಾ ಅವರು ಇಂದು ಗುಜರಾತ್ ವಿಧಾನಸಭೆ ಸ್ಪೀಕರ್ ರಾಜೇಂದ್ರ ತ್ರಿವೇದಿ ಅವರನ್ನು ಭೇಟಿ ಮಾಡಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.
ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಬೆನ್ನಲ್ಲೇ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಬಿಜೆಪಿ ರಾಜ್ಯಾಧ್ಯಕ್ಷ ಜೀತು ವಘಾನಿ ಹಾಗೂ ಇತರ ಇಬ್ಬರು ಸಚಿವರೊಂದಿಗೆ ವಾಲಿಯಾ ಚರ್ಚಿಸಿದ್ದಾರೆ.
ಬವಾಲಿಯಾ ಅವರು 2019ರಲ್ಲಿ ರಾಜಕೋಟ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಈಗ ಬಿಜೆಪಿ ಸೇರುವ ಮೂಲಕ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ.