ಸಂಕಷ್ಟದಲ್ಲಿ ಮಾನಸ ಸರೋವರ ಕನ್ನಡಿಗ ಯಾತ್ರಾರ್ಥಿಗಳು: ನೆರವಿಗೆ ಧಾವಿಸಿದ ಸರ್ಕಾರ

ಬೆಂಗಳೂರು: ಮಾನಸ ಸರೋವರ ಯಾತ್ರೆ ಕೈಗೊಂಡ ರಾಜ್ಯದ 200 ಕ್ಕೂ ಹೆಚ್ಚು ಯಾತ್ರಾರ್ಥಿಗಳ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ನೆರವಿಗೆ ಧಾವಿಸಿದೆ.

ಸಂಕಷ್ಟಕ್ಕೆ  ಸಿಲುಕಿರುವ 200 ಕ್ಕೂ ಹೆಚ್ಚು ಯಾತ್ರಾರ್ಥಿಗಳ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಈ ಸಂಬಂಧ ಎಲ್ಲಾ ಅಗತ್ಯ ತುರ್ತು ಕ್ರಮ ಕೈಗೊಳ್ಳುವಂತೆ ದೆಹಲಿಯ ಕರ್ನಾಟಕ ಭವನದಲ್ಲಿರುವ ಸ್ಥಾನಿಕ ಆಯುಕ್ತರಿಗೆ ಸಿಎಂ ನಿರ್ದೇಶನ ನೀಡಿದ್ದಾರೆ.
ನೇಪಾಳ ಸರ್ಕಾರ, ಭಾರತ ರಾಯಭಾರ ಕಚೇರಿ ಅಧಿಕಾರಿಗಳೊಂದಿಗೆ ಸ್ಥಾನಿಕ ಆಯುಕ್ತರು ಮಾತುಕತೆ ನಡೆಸಿದ್ದಾರೆ. ನೇಪಾಳದಲ್ಲಿರುವ ಭಾರತದ ರಾಯಭಾರ ಕಚೇರಿ ಅಧಿಕಾರಿಗಳು  ಸ್ಥಾನಿಕ ಆಯುಕ್ತರ ಮನವಿಗೆ ತಕ್ಷಣ ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ