ಮಂಡ್ಯ,ಜು.4-ಪರೀಕ್ಷೆಯಲ್ಲಿ ಕಾಪಿ ಹೊಡೆದು ಸಿಕ್ಕಿಬಿದ್ದ ಕಾರಣಕ್ಕೆ ಮನನೊಂದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಶೀಳ ನೆರೆ ಹೋಬಳಿ ಮರಡಹಳ್ಳಿ ಗ್ರಾಮದ ಜಯರಾಮೇಗೌಡ ಎಂಬುವರ ಪುತ್ರಿ ಕಾವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬೆಳ್ಳೂರಿನ ಬಿಜಿಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ ಈಕೆ ಸೋಮವಾರ ನಡೆದ ಪರೀಕ್ಷೆಯಲ್ಲಿ ಕಾಪಿ ಮಾಡಿ ಸಿಕ್ಕಿಬಿದ್ದಿದ್ದಳು. ಇದರಿಂದಾಗಿ ನಿನ್ನೆಯ ಪರೀಕ್ಷೆಗೆ ಅವಕಾಶ ನೀಡಿರಲಿಲ್ಲ ಎನ್ನಲಾಗಿದೆ. ಈ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುದ್ದಿ ತಿಳಿದ ಬೆಳ್ಳೂರು ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.