ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮತ್ತು ಉದ್ಯೋಗ ತರಬೇತಿಗೆ ಹೆಚ್ಚು ಒತ್ತು ನೀಡುವ ಮಹತ್ವದ ಯೋಜನೆಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ನಾಳೆ ಮಂಡಿಸುವ ಬಜೆಟ್‍ನಲ್ಲಿ ಪ್ರಕಟಿಸಲಿದ್ದಾರೆ

 

ಬೆಂಗಳೂರು, ಜು.4- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮತ್ತು ಉದ್ಯೋಗ ತರಬೇತಿಗೆ ಹೆಚ್ಚು ಒತ್ತು ನೀಡುವ ಮಹತ್ವದ ಯೋಜನೆಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ನಾಳೆ ಮಂಡಿಸುವ ಬಜೆಟ್‍ನಲ್ಲಿ ಪ್ರಕಟಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಕೇಂದ್ರ ಸರ್ಕಾರ ಸಬ್‍ಕ ಸಾಥ್ ಸಬ್‍ಕ ವಿಕಾಸ್ ಎಂದು ಬಾಯಿ ಮಾತಿನಲ್ಲೇ ಹೇಳುತ್ತಿದೆ. ಸಮಾಜ ಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಹಣ ಖುರ್ಚು ಮಾಡಿಲ್ಲ. ರಾಜ್ಯ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಖರ್ಚು ಮಾಡಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ವಿಶೇಷ ತರಬೇತಿ ನೀಡಲಾಗುತ್ತಿದೆ. ಉದ್ಯೋಗ ಆಧಾರಿತ ಕೌಶಲ್ಯಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ನಿಜವಾದ ಸಬ್‍ಕ ಸಾಥ್ ಸಬ್‍ಕ ವಿಕಾಸ್ ಕರ್ನಾಟಕದಲ್ಲಿ ನಡೆಯುತ್ತಿದೆ ಎಂದರು. ‘

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ