ಐಪಿಎಫ್ ಟಿ ನಿರ್ಧಾರದಿಂದ ಸರ್ಕಾರಕ್ಕೆ ಧಕ್ಕೆ ಇಲ್ಲ, ಎರಡೂ ಕ್ಷೇತ್ರದಲ್ಲಿ ಸ್ಪರ್ಧೆ ಖಚಿತ: ಬಿಜೆಪಿ

ಅಗರ್ತಲಾ: ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಐಪಿಎಫ್ ಟಿ ನಿರ್ಧಾರದಿಂದ ಹಾಲಿ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
ಅತ್ತ ಬಿಜೆಪಿ ಮೈತ್ರಿ ಪಕ್ಷ ಐಪಿಎಫ್ ಟಿ ಸುದ್ದಿಗೋಷ್ಠಿಯಲ್ಲಿ ತಮ್ಮ ನಿರ್ಧಾರ ಪ್ರಕಟಿಸುತ್ತಿದ್ದಂತೆಯೇ ಇತ್ತ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಮೃಣಾಲ್ ಕಾಂತಿ ದೇಬ್ ಅವರು ಐಪಿಎಫ್ ಟಿ ನಿರ್ಧಾರದಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ. ತಾನು ಈ ಹಿಂದೆಯೇ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಕುರಿತು ಸ್ಪಷ್ಟ ಪಡಿಸಿದ್ದೆ. ಬಿಜೆಪಿ ತನ್ನ ನಿರ್ಧಾರಕ್ಕೆ ಬದ್ಧವಾಗಿದ್ದು, ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ತ್ರಿಪುರಾ ಉಸ್ತುವಾರಿ ಸುನಿಲ್ ದಿಯೋಧರ್ ಅವರು ಈ ಹಿಂದೆಯೇ ತ್ರಿಪುರಾದ ಎರಡೂ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧಿಸಲಿದೆ ಎಂದು ಘೋಷಣೆ ಮಾಡಿದ್ದರು. ಇದರಿಂದ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗಿಲ್ಲ. ಮಹಾರಾಷ್ಟ್ರದಲ್ಲೂ ಇದೇ ಪರಿಸ್ಥಿತಿ ಇದೆ. ಶಿವಸೇನೆ ಚುನಾವಣಾ ಪೂರ್ವದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು, ಆದರೆ ಬಳಿಕ ತನ್ನ ಬೆಂಬಲವನ್ನು ಹಿಂಪಡೆದಿದೆ. ಹಾಗೆಂದ ಮಾತ್ರಕ್ಕೆ ಅಲ್ಲನ ಸರ್ಕಾರಕ್ಕೇನೂ ಧಕ್ಕೆಯಾಗಿಲ್ಲ. ಇದೂ ಕೂಡ ಹಾಗೆೇ ಎಂದು ಕಾಂತಿ ದೇಬ್ ಸ್ಪಷ್ಟ ಪಡಿಸಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ