![oldeg](http://kannada.vartamitra.com/wp-content/uploads/2018/07/oldeg-573x381.jpg)
ಬೆಂಗಳೂರು,ಜು.5- ಹಿರಿಯರ ನಾಗರಿಕರ ಕಲ್ಯಾಣಕ್ಕಾಗಿ ಬದ್ಧವಾಗಿರುವ ಸರ್ಕಾರ ಹಿರಿಯ ನಾಗರಿಕರಿಗೆ ನೀಡುತ್ತಿರುವ 600 ರೂ.ಗಳ ಮಾಸಾಶನವನ್ನು ಒಂದು ಸಾವಿರ ರೂ.ಗೆ ಹೆಚ್ಚಿಸಿ ನ.1ರಿಂದ ಜಾರಿಗೊಳಿಸಲು ನಿರ್ಧರಿಸಿದೆ.
65 ವರ್ಷ ಮೀರಿದ 32.92 ಲಕ್ಷ ವೃದ್ಧರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಹೇಳಿದ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇದಕ್ಕಾಗಿ ಬಜೆಟ್‍ನಲ್ಲಿ 660 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ತಾವು ಮಂಡಿಸಿದ ಆಯವ್ಯಯದಲ್ಲಿ ತಿಳಿಸಿದರು.
ಸಂಧ್ಯಾ ಸುರಕ್ಷಾ ಯೋಜನೆಯಡಿ ಫಲಾನುಭವಿಗಳು ಪ್ರಸ್ತುತ 600 ರೂ.ಗಳ ಮಾಸಾಶನವನ್ನು ಪಡೆಯುತ್ತಿದ್ದಾರೆ. ಇದನ್ನು ಒಂದು ಸಾವಿರ ರೂ.ಗೆ ಹೆಚ್ಚಿಸಿ 2018ರ ನವೆಂಬರ್ 1ರಿಂದ ಜಾರಿಗೊಳಿಸಲಾಗುವುದು. ಈ ಮೊತ್ತವನ್ನು ಮುಂದಿನ 5 ವರ್ಷಗಳಲ್ಲಿ ಹಂತ ಹಂತವಾಗಿ ಹೆಚ್ಚಿಸಲಾಗುವುದು ಎಂದು ಅವರು ಹೇಳಿದರು.