ಸಾರಿಗೆ ಬಸ್ ಮತ್ತು ಬೈಕ್ ಅಪಘಾತ ಒಬ್ಬ ಸಾವು

ಮೈಸೂರು,ಜು.5- ಸಾರಿಗೆ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಳಿಕೆರೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಮಧುಗಿರಿ ಕೊಪ್ಪಲು ನಿವಾಸಿ ದೇವು(28) ಮೃತಪಟ್ಟ ಸವಾರ. ಇವರು ಟೈಟಾನ್ ವಾಚ್ ಕಂಪನಿಯ ಉದ್ಯೋಗಿಯಾಗಿದ್ದರು. ಇಂದು ಬೆಳಗ್ಗೆ ಕೆಲಸಕ್ಕೆ ತೆರುಳುತ್ತಿದ್ದಾಗ ಮೈಸೂರು-ಹುಣಸೂರು ರಾಷ್ಟ್ರೀಯ ಹೆದ್ದಾರಿ ಹುಳ್ಳೆನಹಳ್ಳಿ ಬಳಿ ಕೆಎಸ್‍ಆರ್‍ಟಿಸಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತವಾದ ನಂತರ ಮೈಸೂರು-ಹುಣಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೆÇಲೀಸರು ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬಿಳಿಕೆರೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ