ಬ್ರಾಹ್ಮಣ ಅಭಿವೃದ್ಧಿ ಮಂಡಳಿ

 

ಬೆಂಗಳೂರು, ಜು.5- ಬ್ರಾಹ್ಮಣರ ಕಲ್ಯಾಣಕ್ಕಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚಿಸಲು ಜೆಡಿಎಸ್-ಕಾಂಗ್ರೆಸ್ ಸರ್ಕಾರ 25 ಕೋಟಿ ರೂ.ಗಳನ್ನು ಒದಗಿಸಿದೆ.
ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗೆ ನೆರವು ನೀಡಬೇಕೆಂಬ ಉದ್ದೇಶದಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.
ಬ್ರಾಹ್ಮಣ ಸಮುದಾಯದವರು ಕಳೆದ ಹಲವಾರು ವರ್ಷಗಳಿಂದ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸುವಂತೆ ಒತ್ತಾಯಿಸುತ್ತಿದ್ದರು. ಆದರೆ, ಯಾವೊಂದು ಸರ್ಕಾರವೂ ಮಂಡಳಿ ರಚನೆಗೆ ಮನಸ್ಸು ಮಾಡಿರಲಿಲ್ಲ. ಆದರೆ, ಜೆಡಿಎಸ್-ಕಾಂಗ್ರೆಸ್ ಸರ್ಕಾರ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚಿಸಲು ತೀರ್ಮಾನಿಸಿದೆ.
ಸನಾತನ ಧಾರ್ಮಿಕ ಪರಂಪರೆಯ ಮೇರು ವ್ಯಕ್ತಿಯಾಗಿರುವ ಶಂಕರಾಚಾರ್ಯರ ಜಯಂತಿಯನ್ನು ರಾಜ್ಯಾದ್ಯಂತ ಆಚರಿಸಲು ಕ್ರಮ ವಹಿಸಲಾಗಿದೆ.
ಗೋಮಾಳ, ಕೆರೆ ಸುತ್ತಮುತ್ತಲ ಸರ್ಕಾರಿ ಜಮೀನುಗಳಲ್ಲಿ ಗಿಡ-ಮರ ಬೆಳೆಸಲು ಹಸಿರು ಕರ್ನಾಟಕ ಯೋಜನೆಯನ್ನು ಆಂದೋಲನ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
ಊರಿಗೊಂದು ತೋಪು, ತಾಲೂಕಿಗೊಂದು ಕಿರು ಅರಣ್ಯ, ಜಿಲ್ಲೆಗೊಂದು ಕಾಡು ಎನ್ನುವುದು ಹಸಿರು ಕರ್ನಾಟಕದ ಧ್ಯೇಯವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ