ಅನ್ನಭಾಗ್ಯ ಅಕ್ಕಿ 7 ಕೆಜಿಯಿಂದ 5 ಕೆಜಿಗೆ ಇಳಿಕೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ನೀಡಲಾಗುತ್ತಿದ್ದ ಅಕ್ಕಿ ಪ್ರಮಾಣದಲ್ಲಿ ಕಡಿಮೆ ಮಾಡಲಾಗಿದೆ.

ಕುಟುಂಬದ ಪ್ರತಿ ಸದಸ್ಯನಿಗೆ ಈ ಹಿಂದೆ ಉಚಿತವಾಗಿ ನೀಡಲಾಗುತ್ತಿದ್ದ 7 ಕೆಜಿ ಅಕ್ಕಿ ಬದಲಿಗೆ 5 ಕೆಜಿಗೆ ಇಳಿಸಲಾಗಿದೆ. ಆದರೆ ಬಿಪಿಎಲ್ ಕಾರ್ಡುದಾರರಿಗೆ 1 ಕೆಜಿ ಅಯೋಡಿನ್ ಉಪ್ಪು, 1 ಕೆಜಿ ಸಕ್ಕರೆ, 1 ಕೆಜಿ ಪಾಮ್ ಎಣ್ಣೆ ಮತ್ತು ರಿಯಾಯಿತಿ ದರದಲ್ಲಿ ಅರ್ಧ ಕೆಜಿ ತೊಗರಿ ಬೇಳೆ ವಿತರಣೆ ಮಾಡಲಾಗುತ್ತದೆ ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ