ಬೆಂಗಳೂರು, ಜು.5- ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಹಭಾಗಿತ್ವದಡಿ ಬಹುಮಹಡಿ ವಾಹನ ನಿಲುಗಡೆ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ.
ನಾಗರಿಕರಿಗೆ ಉತ್ತಮ ಸೇವೆ ಕಲ್ಪಿಸುವ ಉದ್ದೇಶದಿಂದ ಸ್ಯಾಟ್‍ಲೈಟ್ ಇಮೇಜ್ ಬಳಕೆ ಮಾಡಿಕೊಂಡು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಎಲ್ಲ ಆಸ್ತಿಗಳನ್ನೂ ಜಿಐಎಸ್ ಆಧಾರಿತ ಮ್ಯಾಪಿಂಗ್ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಮೊದಲ ಹಂತದಲ್ಲಿ ರಾಜ್ಯದ 10 ನಗರ ಪಾಲಿಕೆ ವ್ಯಾಪ್ತಿಯ ನೀರು ಸರಬರಾಜು ಮತ್ತು ಒಳಚರಂಡಿ ಜಾಲದ ಮ್ಯಾಪಿಂಗ್ ಮಾಡಲು ಉದ್ದೇಶಿಸಲಾಗಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಸಕ್ಕರೆ ನಗರಿ ಮಂಡ್ಯ ಅತಿ ವೇಗವಾಗಿ ಬೆಳೆಯುತ್ತಿರುವ ಜಿಲ್ಲೆಯಾಗಿರುವುದರಿಂದ ಆ ನಗರದ ಸರ್ವತೋಮುಖ ಅಭಿವೃದ್ಧಿಗೆ 50 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.
ಹಾಸನ ನಗರದ ಚನ್ನಪಟ್ಟಣ ಕೆರೆಯಲ್ಲಿರುವ ವಿಹಾರಧಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ 36 ಕೋಟಿ ರೂ. ನಿಗದಿಪಡಿಸಲಾಗಿದೆ.