ಬೆಂಗಳೂರು, ಜು.5- ಹಾಸನದಲ್ಲಿ ಮೆಗಾ ಡೈರಿ ಸ್ಥಾಪನೆ ಹಾಗೂ ಮೂಲಭೂತ ಸೌಕರ್ಯಗಳಿಗಾಗಿ 50 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ತಮ್ಮ ಆಯವ್ಯಯದಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಅವರು ಹಾಸನ ಹಾಲು ಒಕ್ಕೂಟದಲ್ಲಿ ಹಾಲಿನ ಶೇಖರಣೆ ಹೆಚ್ಚಾಗುತ್ತಿದ್ದು , ಲಾಭದಾಯಕ ರೀತಿಯಲ್ಲಿ ಶೇಖರಣೆ ಮಾಡಲು 10 ಲಕ್ಷ ಲೀಟರ್ಗಳಿಂದ 15 ಲಕ್ಷ ಲೀಟರ್ ಸಾಮಥ್ರ್ಯದ ಮೆಗಾ ಡೈರಿ ಸ್ಥಾಪನೆಗೆ 50 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.
ಮೀನು ಕೃಷಿಗೆ 4 ಕೋಟಿ: ರಾಜ್ಯದ 20 ಸಾವಿರ ಹೆಕ್ಟೇರ್ ಜಲ ಪ್ರದೇಶದಲ್ಲಿ ಉಚಿತವಾಗಿ ಮೀನುಗಾರರ ಸಹಕಾರ ಸಂಘಗಳ ಮುಖಾಂತರ ಮೀನು ಮರಿಗಳನ್ನು ಬಿತ್ತನೆ ಮಾಡಲು ಉದ್ದೇಶಿಸಲಾಗಿದೆ.
ಈ ನಿಟ್ಟಿನಲ್ಲಿ ಒಳನಾಡು ಮೀನು ಉತ್ಪಾದನೆ ಹೆಚ್ಚಿಸಲು 4 ಕೋಟಿ ರೂ. ವೆಚ್ಚದಲ್ಲಿ ಮೀನು ಮರಿಗಳ ಬಿತ್ತನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾಯಕ ಯೋಜನೆ: ಸ್ವಸಹಾಯ ಗುಂಪುಗಳಲ್ಲಿ ಕೌಶಲ್ಯ ಅಭಿವೃದ್ಧಿಮತ್ತು ಉದ್ಯಮ ಶೀಲತೆಯನ್ನು ವೃದ್ಧಿಗೊಳಿಸಲು ನಿರ್ಧರಿಸಲಾಗಿದೆ. ಸ್ವಯಂ ಉದ್ಯೋಗವನ್ನು ಪೆÇ್ರೀ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ ಕಾಯಕ ಎಂಬ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.
ಇದಕ್ಕಾಗಿ ಸಹಕಾರ ಸಂಸ್ಥೆಗಳ ಪ್ರತಿ ಗುಂಪಿಗೆ ಗರಿಷ್ಠ 10 ಲಕ್ಷಗಳವರೆಗೆ ಸಾಲ ಒದಗಿಸಲು 5 ಕೋಟಿ ರೂ.ಗಳ ಅನುದಾನ ಮೀಸಲಿರಿಸಲಾಗಿದೆ.
ಬಡವರ ಬಂಧು: ಬೀದಿ ವ್ಯಾಪಾರಿಗಳು , ಸಣ್ಣ ವ್ಯಾಪಾರಿಗಳಿಗೆ ನೆರವು ನೀಡುವ ಉದ್ದೇಶದಿಂದ ಕಿರು ಹಣಕಾಸು ಸಾಲ ಸೌಲಭ್ಯ ಒದಗಿಸುವ ಬಡವರ ಬಂಧು ಸಂಚಾರ ಸೇವೆ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.