ಮನೆಯಲ್ಲಿ ಗೃಹಿಣಿ ಯೊಬ್ಬರ ಅನುಮಾನಾಸ್ಪದ ಸಾವು

 

ಬೆಂಗಳೂರು, ಜು.5-ಮನೆಯಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸಿದ್ಧಾಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸೋಮೇಶ್ವರ ಬಡಾವಣೆಯ 9ನೇ ಕ್ರಾಸ್ ಮಾವಳ್ಳಿ ಮಟನ್ ಸ್ಟಾಲ್ ಮುಂಭಾಗದ ನಿವಾಸಿ ರಿಯಾನಾಬಾನು (46) ಮೃತಪಟ್ಟಿರುವ ಮಹಿಳೆ.
ನಿನ್ನೆ ಮಧ್ಯಾಹ್ನ 3 ಗಂಟೆಯಿಂದ 5 ಗಂಟೆ ಮಧ್ಯೆ ಈ ಮಹಿಳೆ ಮೃತಪಟ್ಟಿದ್ದಾರೆ. ಪತಿ ಮನೆಗೆ ಬಂದು ಬಾಗಿಲು ಬಡಿದಾಗ ಬೆಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ನಂತರ ಬಾಗಿಲು ತೆಗೆದು ನೋಡಿದಾಗ ಈ ಮಹಿಳೆ ಸಾವನ್ನಪ್ಪಿರುವುದು ಗೊತ್ತಾಗಿದೆ.
ಸಾವು ಹೇಗೆ ಸಂಭವಿಸಿದೆ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಸುದ್ದಿ ತಿಳಿದ ಪೆÇಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.
ಘಟನೆ ಸಂಬಂಧ ರಿಯಾನಾಬಾನು ಅವರ ತಾಯಿ ಸಿದ್ದಾಪುರ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದು, ವರದಿ ಬಂದ ನಂತರವೇ ಸಾವು ಹೇಗೆ ಸಂಭವಿಸಿರಬಹುದು ಎಂಬುದು ತಿಳಿದುಬರಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ