
ಬೆಂಗಳೂರು, ಜು.5- ಎಲ್ಲಾ ಇಲಾಖೆಗಳಿಗೆ ಅನುದಾನ ಕಡಿತ ಮಾಡಲಾಗಿದ್ದು, ಜನರಿಗೆ ಮೋಸ ಮಾಡಿದ ಬಜೆಟ್ ಇದೆಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಇಂದಿಲ್ಲಿ ಆಕ್ಷೇಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಿಂದ ರಾಜ್ಯದ ಜನರಿಗೆ ಅನುಕೂಲವಾಗುವ ಬದಲಿಗೆ ಅನಾನುಕೂಲವೇ ಆಗಲಿದೆ. ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರೈತರ ಸಾಲಮನ್ನಾ ಮಾಡುವವರೆಗೆ ಹೋರಾಟ ನಡೆಸುವುದಾಗಿ ಹೇಳಿದರು.