ಬೆಂಗಳೂರು, ಜು.5- ಕಾರವಾರ, ತುಮಕೂರು, ಯಾದಗಿರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ 5 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಇಸ್ರೇಲ್ ಮಾದರಿ ತೋಟಗಾರಿಕಾ ಮಾಡಲು 150 ಕೋಟಿ ರೂ. ನಿಗದಿಪಡಿಸಲಾಗಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಾವು ಮಂಡಿಸಿದ ಬಜೆಟ್‍ನಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು ತೋಟಗಾರಿಕಾ ವಲಯದಲ್ಲಿ ಇಸ್ರೇಲ್ ಮಾದರಿ ನೀರಾವರಿ ಕ್ರಮಗಳನ್ನು ಅಳವಡಿಸಲು ಸಾಧ್ಯವಿರುತ್ತದೆ ಎಂದರು.
ರಾಜ್ಯದ ಪ್ರಮುಖ ನಗರಗಳನ್ನು ಸಂಪರ್ಕಿಸುವ ಹೆದ್ದಾರಿ ಮತ್ತು ರಸ್ತೆಗಳಲ್ಲಿ ಗುರುತಿಸುವ 10 ಸ್ಥಳಗಳಲ್ಲಿ ಎಪಿಎಂಸಿ ವತಿಯಿಂದ ಪಿಪಿಪಿ ಸಹಭಾಗಿತ್ವದಲ್ಲಿ ಮಾರುಕಟ್ಟೆ ಶುಲ್ಕ ಆದಾಯ ಹಂಚಿಕೆ ಮಾದರಿಯಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳೊಂದಿಗೆ ಸುಸಜ್ಜಿತ ಮಾರುಕಟ್ಟೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.
ತೆಂಗು ಬೆಳೆಗಾರರ ಹಿತರಕ್ಷಣೆಗಾಗಿ ಒಂದು ಯೋಜನೆ ರೂಪಿಸಲಾಗುತ್ತಿದೆ. ಇದಕ್ಕಾಗಿ 190 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದರು.
ಸಂಪೂರ್ಣ ಒಣಗಿರುವ ತೋಟಗಳಲ್ಲಿ ಪರ್ಯಾಯ ಬೆಳೆಗಳಾದ ಮಾವು , ಗೋಡಂಬಿ, ಹುಣಸೆ , ಸೀತಾಫಲ, ನೇರಳೆ ಮುಂತಾದ ಬೆಳೆಗಳನ್ನು ಬೆಳೆಯಲು ಪೆÇ್ರೀ ಎಂದು ತಿಳಿಸಿದರು.