ಕಂಠೀರವ ಸ್ಟುಡಿಯೋ ಆವರಣದಲ್ಲಿ ಸುಸಜ್ಜಿತವಾದ ಯೋಗ ಕೇಂದ್ರ

????????????????????????????????????

 

ಬೆಂಗಳೂರು, ಜು.5- ವರನಟ ಡಾ.ರಾಜ್‍ಕುಮಾರ್ ಸ್ಮರಣಾರ್ಥ ಕಂಠೀರವ ಸ್ಟುಡಿಯೋ ಆವರಣದಲ್ಲಿ ಸುಸಜ್ಜಿತವಾದ ಯೋಗ ಕೇಂದ್ರ ಸ್ಥಾಪಿಸಲು ಸರ್ಕಾರ ಮನಸ್ಸು ಮಾಡಿದೆ.
ಚಿತ್ರ ನಿರ್ಮಾಣಕ್ಕೆ ಅನುಕೂಲವಾಗುವಂತೆ ರಾಮನಗರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಚಲನಚಿತ್ರ ವಿವಿ ತೆರೆಯಲು 30 ಕೋಟಿ ರೂ. ಬಂಡವಾಳ ನೀಡಲು ತೀರ್ಮಾನಿಸಲಾಗಿದೆ.
ಇದರ ಜತೆಗೆ ರಾಮನಗರದ ಫಿಲ್ಮಂ ಸಿಟಿಯಲ್ಲಿ ಛಾಯಾಚಿತ್ರ, ಸಂಕಲನ, ಸೌಂಡ್ ರೆಕಾರ್ಡಿಂಗ್, ಅನಿಮೇಷನ್ ಸ್ಟುಡಿಯೋ, ಕಂಪ್ಯೂಟರ್ ಗ್ರಾಫಿಕ್ ಸ್ಟುಡಿಯೋಗಳ ಸ್ಥಾಪನೆಗೆ 40 ಕೋಟಿ ರೂ. ಅನುದಾನ ನೀಡಲು ಸಮ್ಮತಿಸಲಾಗಿದೆ.
ಹೊರದೇಶದಿಂದ ಚಿತ್ರ ನಿರ್ಮಾಣಕ್ಕಾಗಿ ಬರುವ ಕಲಾವಿದರು ಮತ್ತು ತಂತ್ರಜ್ಞರಿಗೆ ವಸತಿ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳ ನಿರ್ಮಾಣಕ್ಕಾಗಿ 20 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹೊಸೂರಿನಲ್ಲಿ ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯನವರ ಸ್ಮರಣಾರ್ಥ ಅಂತಾರಾಷ್ಟ್ರೀಯ ವಿಜ್ಞಾನ ಕೇಂದ್ರ ತೆರೆಯಲಾಗುವುದು.
ಮಕ್ಕಳಿಗೆ ಸ್ವಯಂ ಪರಿಶೋಧನೆ ಮೂಲಕ ಸೀಮಾರಹಿತವಾದ ಜ್ಞಾನ ಹೊಂದಲು ಸಹಕರಿಸುವಂತೆ ಈ ಕೇಂದ್ರವನ್ನು ನೋಡಲ್ ಸಂಸ್ಥೆಯಾಗಿ ಅಭಿವೃದ್ಧಿಪಡಿಸಲು ಸರ್ಕಾರ ತೀರ್ಮಾನಿಸಿದೆ.
ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆಯನ್ನು ಸಾಕಾರಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಆಸಕ್ತ ಖಾಸಗಿ ಸಂಸ್ಥೆಗಳು ಈ ಯೋಜನೆಯಲ್ಲಿ ಭಾಗಿಯಾಗಬಹುದು ಎಂದು ಸರ್ಕಾರ ಮನವಿ ಮಾಡಿಕೊಂಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ