ವಿದ್ಯುತ್ ತೆರಿಗೆ ದರ ಯುನಿಟ್‍ಗೆ 10 ಪೈಸೆಯಿಂದ 20 ಪೈಸೆಗೆ ಹೆಚ್ಚಳ

 

ಬೆಂಗಳೂರು, ಜು.5- ಸ್ವಂತ ಬಳಕೆಯ ವಿದ್ಯುತ್ ಮೇಲಿನ ತೆರಿಗೆ ದರವನ್ನು ಪ್ರತಿ ಯುನಿಟ್‍ಗೆ 10 ಪೈಸೆಯಿಂದ 20 ಪೈಸೆಗೆ ಹೆಚ್ಚಳ ಮಾಡಲಾಗಿದೆ.
ಅದೇ ರೀತಿ ವಿದ್ಯುತ್ ಬಳಕೆ ಮೇಲಿನ ತೆರಿಗೆಯನ್ನು ಶೇ.6 ರಿಂದ 9ಕ್ಕೆ ಏರಿಕೆ ಮಾಡಲಾಗಿದೆ.
ವಿದ್ಯುತ್ ತೆರಿಗೆ ಏರಿಕೆ ಮಾದರಿಯಲ್ಲಿ ಮೋಟಾರು ವಾಹನ ತೆರಿಗೆಯನ್ನು ಹೆಚ್ಚಳ ಮಾಡುವ ವಿಚಾರವನ್ನು ಬಜೆಟ್‍ನಲ್ಲಿ ಮುಖ್ಯಮಂತ್ರಿಗಳು ಪ್ರಸ್ತಾಪಿಸಿದ್ದಾರೆ.
ಖಾಸಗಿ ಸೇವಾ ವಾಹನ ತೆರಿಗೆಯನ್ನು ಪ್ರತಿ ಚದರ ಮೀಟರ್‍ಗೆ ಶೇ.50ರಷ್ಟು ಹೆಚ್ಚಳ ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ