ದರ ಏರಿಕೆ ಮೂಲಕ ಬಡವರಿಗೆ ಅನ್ಯಾಯ – ಆರ್.ಅಶೋಕ್

 

ಬೆಂಗಳೂರು, ಜು.5-ರೈತರ-ಬಡವರ ಪರ ಸರ್ಕಾರ ಎನ್ನುವವರು ಇದೀಗ ದರ ಏರಿಕೆ ಮಾಡುವ ಮೂಲಕ ಬಡವರಿಗೆ ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರದ ಬಜೆಟ್‍ನಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಜೆಟ್‍ನಲ್ಲಿ ರಾಜ್ಯದ ಕೆಲವು ಜಿಲ್ಲೆಗಳನ್ನು ಒಟ್ಟಾರೆ ಶಿವಮೊಗ್ಗ ಉತ್ತರ ಕರ್ನಾಟಕವನ್ನು ಎಲ್ಲೂ ಹೆಸರಿಸಿಯೂ ಇಲ್ಲ ಎಂದು ಆಕ್ಷೇಪಿಸಿದರು.
ಪೆಟ್ರೋಲ್, ಡೀಸಲ್ ಹಾಗೂ ವಿದ್ಯುತ್ ದರ ಏರಿಕೆಯಿಂದ ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದ ತತ್ತರಿಸಿರುವ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ ಎಂದರು.
ನಮ್ಮ ಹೋರಾಟ ಮುಂದುವರೆಯಲಿದೆ. ರೈತರ ಮತ್ತು ಬಡವರ ಹೋರಾಟ ನಿರಂತರ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ