ಬೆಂಗಳೂರು, ಜು.5- ಪೀಣ್ಯ ಕೈಗಾರಿಕಾ ವಲಯದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ರಾಸಾಯನಿಕ ತ್ಯಾಜ್ಯ ವಸ್ತುಗಳ ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.
ನಗರದ ಕೊಳಚೆ ನೀರಿನಲ್ಲಿ ಹೆಚ್ಚುತ್ತಿರುವ ರಾಸಾಯನಿಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಆ ನೀರನ್ನು ಶುದ್ಧೀಕರಿಸುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.
ಐತಿಹಾಸಿಕ ಮೈಸೂರು ನಗರ ಹಾಗೂ ಮಾರ್ಗಮಧ್ಯದ 92 ಹಳ್ಳಿಗಳ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕಾವೇರಿ ನದಿಯಿಂದ ಹೆಚ್ಚುವರಿಯಾಗಿ 300 ಎಂಎಲ್ಡಿ ನೀರನ್ನು ಸರಬರಾಜು ಮಾಡಲು ಆಯವ್ಯಯದಲ್ಲಿ 50 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ.
ರಾಜ್ಯದ ನ್ಯಾಯಾಂಗ ಪರಂಪರೆಯನ್ನು ಜನಸಾಮಾನ್ಯರಿಗೆ ಪರಿಚಯಿಸುವ ಉದ್ದೇಶದಿಂದ ಅಮೂಲ್ಯ ದಾಖಲೆಗಳು ಮತ್ತು ಚಿತ್ರಗಳನ್ನೊಳಗೊಂಡ ನ್ಯಾಯಾಂಗ ಮ್ಯೂಜಿಯಂ ಸ್ಥಾಪನೆಗೆ 1 ಕೋಟಿ ರೂ. ಅನುದಾನ ಹಾಗೂ ಬೆಂಗಳೂರು ಬಾರ್ಕೌನ್ಸಿಲ್ ಕಾರ್ಯಚಟುವಟಿಕೆಗಳನ್ನು ಪೆÇ್ರೀ ಉದ್ದೇಶದಿಂದ ಬಜೆಟ್ನಲ್ಲಿ 5 ಕೋಟಿ ರೂ.ಗಳ ಆರ್ಥಿಕ ನೆರವು ಪ್ರಕಟಿಸಲಾಗಿದೆ.