ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ

ತುಮಕೂರು, ಜು.5- ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಚಾಲಕರ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ದಿವ್ಯಾಗೋಪಿನಾಥ್ ಅವರು ಪೆÇಲೀಸರಿಗೆ ಸೂಚಿಸಿದ್ದಾರೆ. ದೂರವಾಣಿ ಮೂಲಕ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆ ಬಗ್ಗೆ ಸಾರ್ವಜನಿಕರಿಂದ ವ್ಯಾಪಕವಾಗಿ ದೂರುಗಳು ಕೇಳಿ ಬರುತ್ತಿವೆ. ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಪಾದಚಾರಿಗಳಿಗೆ ಕಿರಿಕಿರಿಯಾಗುತ್ತಿದ್ದು, ಇದನ್ನು ತಪ್ಪಿಸುವಲ್ಲಿ ಸಂಚಾರಿ ಪೆÇಲೀಸರು ಶಿಸ್ತಿನ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.
ಅಲ್ಲದೆ, ಬೈಕ್ ವೀಲ್ಹಿಂಗ್ ಮಾಡುವವರ ವಿರುದ್ಧವೂ ಸಹ ಮುಲಾಜಿಲ್ಲದೆ ಕ್ರಮಕೈಗೊಳ್ಳುವಂತೆ ತಿಳಿಸಿದ ಅವರು, ನಗರ ದಿನೇ ದಿನೇ ವಿಸ್ತಾರಗೊಳ್ಳುತ್ತಿದ್ದು, ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.
ಶಾಲಾ ಬಸ್‍ಗಳು, ಆಟೋ, ಓಮ್ನಿ ಕಾರು ಮತ್ತು ಶಾಲಾ ವಾಹನಗಳಲ್ಲಿ ಅಗತ್ಯ ಪ್ರಮಾಣಕ್ಕಿಂತ ಹೆಚ್ಚಿನ ಮಕ್ಕಳನ್ನು ಕರೆದೊಯ್ಯುತ್ತಿರುವ ದೃಶ್ಯಗಳು ನಗರದಲ್ಲಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ವೃತ್ತ ನಿರೀಕ್ಷಕ ಚಂದ್ರಶೇಖರ್ ಅವರು ಖುದ್ದು ವಾಹನಗಳ ತಪಾಸಣೆ ನಡೆಸಿದರು. ಈ ವೇಳೆ ಬಹುತೇಕ ಶಾಲಾ ವಾಹನಗಳಿಗೆ ಅಗತ್ಯ ದಾಖಲೆಗಳೇ ಇಲ್ಲದಿರುವುದು ಕಂಡುಬಂದಿದ್ದು, ಅಮಾಯಕ ಕಂದಮ್ಮಗಳ ಜೀವದ ಜೊತೆ ಚೆಲ್ಲಾಟವಾಡುವ ಚಾಲಕರ ವಿರುದ್ಧ ಕೆಂಡಾಮಂಡಲರಾಗಿ ದಾಖಲೆಗಳಿಲ್ಲದ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಶಾಲಾ ಆಡಳಿತ ಮಂಡಳಿಗಳು ಸಹ ವಾಹನಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಸಂಚಾರ ನಿಯಮ ಪಾಲಿಸಬೇಕು. ಒಂದು ವೇಳೆ ಕಾನೂನು ಉಲ್ಲಂಘಿಸಿದರೆ ಶಿಸ್ತು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಪೆÇೀಷಕರೇ ಎಚ್ಚರ! ಹಣದ ಆಸೆಗೆ ಖಾಸಗಿ ವಾಹನ ಮಾಲೀಕರು ಹಾಗೂ ಕೆಲ ಶಾಲಾ ವಾಹನಗಳು ಮಕ್ಕಳನ್ನು ಕಿಕ್ಕಿರಿದು ವಾಹನಗಳಲ್ಲಿ ತುಂಬಿಸಿಕೊಂಡು ಹೋಗುತ್ತಾರೆ. ಇದರಿಂದ ಏನಾದರೂ ಅನಾಹುತಗಳಾದರೆ ಪಶ್ಚಾತ್ತಾಪ ಪಡಬೇಕಾದವರು ನೀವೇ. ಹಾಗಾಗಿ ಮಕ್ಕಳನ್ನು ವಾಹನಗಳಲ್ಲಿ ಶಾಲೆಗೆ ಕಳುಹಿಸುವ ಮುನ್ನ ವಾಹನದ ಸ್ಥಿತಿ ಹೇಗಿದೆ ಎಂದು ಪರಿಶೀಲಿಸಿ ನಂತರ ಕಳುಹಿಸಿ ಎಂದು ಸಲಹೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ