ಸಾರಿಗೆ ಸೇವೆಯ ಸಮಗ್ರ ಸುಧಾರಣೆಗಾಗಿ ಏಕೀಕೃತ ಭೂ ಸಾರಿಗೆ ಪ್ರಾಧಿಕಾರ

 

ಬೆಂಗಳೂರು, ಜು.5- ನಗರದ ಸಾರಿಗೆ ಸೇವೆಯ ಸಮಗ್ರ ಸುಧಾರಣೆಗಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಏಕೀಕೃತ ಭೂ ಸಾರಿಗೆ ಪ್ರಾಧಿಕಾರ ರಚನೆಯಾಗಲಿದೆ.
ಬಿಎಂಆರ್‍ಸಿಎಲ್, ಬಿಎಂಟಿಸಿ, ಬಿಡಿಎ, ಬಿಬಿಎಂಪಿ ಸಂಸ್ಥೆಗಳ ನಡುವೆ ಸಮನ್ವಯ ವಹಿಸಿ ಕೈಗೆಟಕುವ ದರದಲ್ಲಿ ಅಡೆ-ತಡೆಗಳಿಲ್ಲದ ಅನುಕೂಲಕರ ಸಾರಿಗೆ ವ್ಯವಸ್ಥೆ ಕಲ್ಪಿಸುವುದೇ ಈ ಪ್ರಾಧಿಕಾರದ ಉದ್ದೇಶ.
ಸಾರ್ವಜನಿಕರ ಉಪಯೋಗಕ್ಕಾಗಿ 4236 ಹೊಸ ಬಸ್‍ಗಳನ್ನು ಖರೀದಿಸಲು ತೀರ್ಮಾನಿಸಲಾಗಿದೆ. ಇದರ ಜತೆಗೆ 80 ಎಲೆಕ್ಟ್ರಿಕ್ ಬಸ್‍ಗಳನ್ನು ಓಡಿಸಲು ಚಿಂತನೆ ನಡೆಸಲಾಗಿದೆ.
ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿವಾರಿಸಿಕೊಂಡು ಉತ್ತಮ ಸಾರಿಗೆ ಸೇವೆ ಒದಗಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 100 ಕೋಟಿ ರೂ.ಗಳ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ.
ಏರುತ್ತಿರುವ ವಾಯುಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಎಲೆಕ್ಟ್ರಾನಿಕ್ ವಾಹನಗಳ ಬಳಕೆಯನ್ನು ಪೆÇ್ರೀ 4 ಕೋಟಿ ರೂ. ವೆಚ್ಚದಲ್ಲಿ 100 ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ