ಭದ್ರತಾ ವಿವಿ, ಕ್ರೀಡಾ ಮತ್ತು ಅಂಗ ಸಾಧನಾ ವಿವಿ ಸ್ಥಾಪನೆ

Varta Mitra News

 

ಬೆಂಗಳೂರು, ಜು.5- ಶಿವಮೊಗ್ಗದಲ್ಲಿ ತಾಯಿ ನಾಡು ಭದ್ರತಾ ವಿಶ್ವವಿದ್ಯಾಲಯ, ತುಮಕೂರಿನಲ್ಲಿ ಕ್ರೀಡಾ ಮತ್ತು ಅಂಗ ಸಾಧನಾ ವಿವಿ ಸ್ಥಾಪನೆಗೆ ಸರ್ಕಾರ ಮುಂದಾಗಿದೆ.
ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಲಕ್ಷಾಂತರ ಭದ್ರತಾ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡುವ ಉದ್ದೇಶದಿಂದ ಶಿವಮೊಗ್ಗದಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ತಾಯಿ ನಾಡು ಭದ್ರತಾ ವಿವಿ ಆರಂಭಿಸಲು ಬಜೆಟ್‍ನಲ್ಲಿ 3 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ.
ಅದೇ ರೀತಿ ತುಮಕೂರು ಜಿಲ್ಲೆಯಲ್ಲಿ ಕ್ರೀಡೆ ಮತ್ತು ಅಂಗಸಾಧನೆಗೆ ಸಂಬಂಧಿಸಿದ ವಿಶ್ವವಿದ್ಯಾಲಯ ಸ್ಥಾಪಿಸಲು 3 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ.
ಮಾನವ ಸಂಪನ್ಮೂಲವನ್ನು ಉತ್ತೇಜಿಸುವ ಉದ್ದೇಶದಿಂದ ಐತಿಹಾಸಿಕ ಹಂಪಿಯಲ್ಲಿ ಪ್ರವಾಸೋದ್ಯಮ ವಿಶ್ವವಿದ್ಯಾಲಯ ಸ್ಥಾಪಿಸಲು 3 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
ಪದವಿ ಪೂರ್ವ ಮತ್ತು ಪದವಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ತರಬೇತಿ ನೀಡಲಾಗುವುದು.
ರಾಜ್ಯದ ಸರ್ಕಾರಿ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ