ಮೈಸೂರು, ಜು.6-ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಅರವಿಂದ್ ರಾವ್ (21) ಮೃತಪಟ್ಟ ಯುವಕ.
ಅರವಿಂದ್ರಾವ್ ಮತ್ತು ನಯನ ಎಂಬ ಯುವತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಚಾಮುಂಡಿ ಬೆಟ್ಟದ ಐವಾನ್ ಜಂಕ್ಷನ್ ಬಳಿ ಕಾರೊಂದು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಅರವಿಂದ್ರಾವ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಯನ ಸಣ್ಣ-ಪುಟ್ಟ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಅಪಘಾತ ಸಂಭವಿಸಿದ ಕೂಡಲೇ ಕಾರಿನ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದು, ಆತನಿಗಾಗಿ ಪೆÇಲೀಸರು ಶೋಧ ನಡೆಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಸಿದ್ಧಾರ್ಥ ಸಂಚಾರಿ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.