ಭಾರತ ಪ್ರವಾಸದಲ್ಲಿ ಭೂತಾನ್ ಪ್ರಧಾನಮಂತ್ರಿ ಶೇರಿಂಗ್ ಟೊಬ್‍ಗೇ

ನವದೆಹಲಿ, ಜು.6- ಭಾರತ ಭೇಟಿಯಲ್ಲಿರುವ ಭೂತಾನ್ ಪ್ರಧಾನಮಂತ್ರಿ ಶೇರಿಂಗ್ ಟೊಬ್‍ಗೇ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ರಾಜಧಾನಿ ದೆಹಲಿಯಲ್ಲಿ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಉಭಯ ದೇಶಗಳ ನಡುವೆ ರಕ್ಷಣೆ, ಭದ್ರತೆ ಹಾಗೂ ಮಹತ್ವದ ಸಹಭಾಗಿತ್ವ ಕುರಿತ ವಿಷಯಗಳು ಮುಖ್ಯವಾಗಿ ಚರ್ಚೆಗೆ ಗ್ರಾಸವಾದವು. ಮೂರು ದಿನಗಳ ಭಾರತ ಭೇಟಿಗಾಗಿ ನಿನ್ನೆ ದೆಹಲಿಗೆ ಆಗಮಿಸಿದ ಭೂತಾನ್ ಪ್ರಧಾನಿ ಹೈದರಾಬಾದ್ ಹೌಸ್‍ನಲ್ಲಿ ಮೋದಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವಿಟರ್‍ನಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ