ಬೆಂಗಳೂರು, ಜು.6- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಸುಭದ್ರ ಆಡಳಿತ ನಡೆಸಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ವಿಪಕ್ಷ ಅನಗತ್ಯವಾಗಿ ಹುಳಿ ಹಿಂಡುವುದು ಬೇಡ ಎಂದು ಜೆಡಿಎಸ್‍ನ ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ಮಾತನಾಡಿದ ಅವರು, ನಮ್ಮ ಸರ್ಕಾರ ಜನಪರವಾಗಿ ಯೋಚಿಸುತ್ತಿದೆ. ರೈತರ ಕಷ್ಟಗಳನ್ನು ಪರಿಹರಿಸಲು ಸಾಲ ಮನ್ನಾ ಮಾಡಲಾಗಿದೆ. ಇಸ್ರೇಲ್ ಮಾದರಿಯ ಕೃಷಿ ಪದ್ಧತಿ ಯೋಜನೆ ರೂಪಿಸಲಾಗಿದೆ. ಸಹಕಾರ, ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಮಾಡಲು ಮುಂದಾಗಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ಒಂದೇ ಮನೆಯ ಸದಸ್ಯರಂತಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.