ಅಪಘಾತದಲ್ಲಿ ವಿದ್ಯಾರ್ಥಿ ಸಾವು

ಮೈಸೂರು, ಜು.6-ಬೈಕ್‍ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯೊಬ್ಬ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಕೆ.ಆರ್.ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೆ.ಆರ್.ನಗರ ತಾಲೂಕಿನ ದಿಡ್ಡಹಳ್ಳಿ ವಾಸಿ ವಿದಾತ್ (22) ಮೃತಪಟ್ಟ ದುರ್ದೈವಿ. ಹಿಂಬದಿ ಕುಳಿತಿದ್ದ ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಕೆ.ಆರ್.ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಇವರಿಬ್ಬರು ಬೈಕ್‍ನಲ್ಲಿ ಹೋಗುತ್ತಿದ್ದಾಗ ಕೆ.ಆರ್.ನಗರ ಹೊಸೂರು ಬಳಿ ಈ ಘಟನೆ ನಡೆದಿದೆ. ಕೆ.ಆರ್.ನಗರ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ