ಕಲಬುರಗಿ,ಜೂ.6-ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂಕಲಗ ಗ್ರಾಮದ ರಾಜಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ರೈತ. ರಾಜಶೇಖರ್ ಅವರು ಬ್ಯಾಂಕ್ ಸೇರಿದಂತೆ ಹಲವೆಡೆ ಖಾಸಗಿಯಾಗಿ 15 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಸಾಲಗಾರರ ಕಾಟ ತಾಳಲಾರದೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಅಂಕಲಗ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.