ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯ

ದಾವಣಗೆರೆ,ಜೂ.6- ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಕಾವೇರಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಮಾತ್ರವಲ್ಲದೆ ಮಧ್ಯ ಕರ್ನಾಟಕದ ದಾವಣಗೆರೆ ಸೇರಿದಂತೆ ವಿವಿಧ ಭಾಗಗಳಲ್ಲೂ ಭತ್ತ ಬೆಳೆಯುತ್ತಿರುವುದರಿಂದ ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಬೇಕೆಂದು ಅವರು ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಭತ್ತ ಪ್ರಮುಖ ಬೆಳೆಯಾಗಿದೆ. ಖರೀದಿ ಕೇಂದ್ರ ತೆಗೆಯುವುದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಅವರು ಪತ್ರಿಕೆಗೆ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ