ಜಿಟಿ ಜಿಟಿ ಮಳೆಯಿಂದ ಜನಜೀವನ ಅಸ್ತವ್ಯೆಸ್ತ

ಮೈಸೂರು, ಜು.7-ನಗರದಲ್ಲಿ ಬೆಳಗ್ಗೆಯಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಮೈಸೂರಿಗರು ಹೈರಾಣಾಗಿದ್ದಾರೆ. ಮುಂಜಾನೆ 6 ಗಂಟೆಯಿಂದ ಆರಂಭವಾದ ಮಳೆ ಮಧ್ಯಾಹ್ನದವರೆಗೂ ಸುರಿಯುತ್ತಲೇ ಇತ್ತು. ಮೈಸೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ನಾಗರಿಕರು ಹೊರ ಬರುವುದೇ ಕಷ್ಟವಾಯಿತು. ಇಂದು ಶನಿವಾರವಾದ್ದರಿಂದ ಬೆಳಗ್ಗೆಯೇ ವಿದ್ಯಾರ್ಥಿಗಳು ಮಳೆಯಲ್ಲಿ ನೆನೆದುಕೊಂಡೇ ಹೋಗುತ್ತಿದ್ದರೆ, ಇನ್ನು ಕೆಲವು ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆಯಿದ್ದುದು ಕಂಡುಬಂತು.
ಹವಾಮಾನ ಇಲಾಖೆ ಇನ್ನು ಎರಡು ದಿನಗಳ ಮಳೆ ಬೀಳುವ ಮುನ್ಸೂಚನೆ ನೀಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ