ಪೆÇಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಅವರ ಅವಲಂಬಿತ ಸದಸ್ಯರ ವೈದ್ಯಕೀಯ ಚಿಕಿತ್ಸಾ ವೆಚ್ಚ ಮರುಪಾವತಿಗಾಗಿ 12.77 ಕೋಟಿ ರೂ.ಗಳನ್ನು ಆರೋಗ್ಯಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಬಿಡುಗಡೆ

 

ಬೆಂಗಳೂರು, ಜು.7- ಪೆÇಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಅವರ ಅವಲಂಬಿತ ಸದಸ್ಯರ ವೈದ್ಯಕೀಯ ಚಿಕಿತ್ಸಾ ವೆಚ್ಚ ಮರುಪಾವತಿಗಾಗಿ 12.77 ಕೋಟಿ ರೂ.ಗಳನ್ನು ಆರೋಗ್ಯಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಆರೋಗ್ಯ ಭಾಗ್ಯ ಯೋಜನೆಯಡಿ ಪೆÇಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಂಬದ ಸದಸ್ಯರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಬಿಲ್ಲುಗಳನ್ನು ಕಳೆದ ಜನವರಿಯಿಂದ ಪಾವತಿಯಾಗದೆ ಬಾಕಿ ಉಳಿಸಿಕೊಳ್ಳಲಾಗಿತ್ತು.
ಆರೋಗ್ಯ ಭಾಗ್ಯ ಯೋಜನೆಯಡಿ ಗುರುತಿಸಲಾದ ಆಸ್ಪತ್ರೆಗಳಲ್ಲಿ ಪೆÇಲೀಸ್ ಸಿಬ್ಬಂದಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಬಾಕಿ ಬಿಲ್ಲುಗಳನ್ನು ಪಾವತಿಸಲು ಹಣ ಬಿಡುಗಡೆ ಮಾಡುವಂತೆ ರಾಜ್ಯ ಪೆÇಲೀಸ್ ಮಹಾನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ರಾಜ್ಯ ಪೆÇಲೀಸ್ ಮಹಾನಿರ್ದೇಶಕರ ಪ್ರಸ್ತಾವನೆಯನ್ನು ಪರಿಗಣಿಸಿದ ಒಲಾಡಳಿತ (ಪೆÇಲೀಸ್ ಸೇವೆಗಳು) ಇಲಾಖೆ ಪ್ರಸಕ್ತ ಆಯವ್ಯಯದಲ್ಲಿ ನಿಗದಿಪಡಿಸಿದ್ದ 51.11 ಕೋಟಿ ರೂ. ವೆಚ್ಚದಲ್ಲಿ 12.77 ಕೋಟಿ ರೂ.ವನ್ನು ಬಿಡುಗಡೆ ಮಾಡಿ ಆದೇಶಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ