
ಕಾರ್ಡಿಪ್ : ಸೊಪಿಯಾ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಇಂಗ್ಲೆಂಡ್ ಐದು ವಿಕೆಟ್ ಗಳ ಅಂತರದಿಂದ ಭಾರತವನ್ನು ಸೋಲಿಸಿದೆ. ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡು ಭಾರತವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿತ್ತು. ರೋಹಿತ್ ಶರ್ಮಾ 5, ಶಿಖರ್ ಧವನ್ 10, ಕೆ.ಎಲ್. ರಾಹುಲ್ 6, ವಿರಾಟ್ ಕೊಹ್ಲಿ 47 , ಸುರೇಶ್ ರೈನಾ 27, ಎಂ.ಎಸ್, ಧೋನಿ 32, ಹಾರ್ದಿಕ್ ಪಾಂಡ್ಯ 12 ರನ್ ಗಳಿಸಿದರು. ನಾಯಕ ವಿರಾಟ್ ಕೊಹ್ಲಿ ಹಾಗೂ ಸುರೇಶ್ ರೈನಾ ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ 57 ರನ್ ಕಲೆಹಾಕಿದರು.