ಕಾವೇರಿ ಪ್ರಾಧಿಕಾರದ ರಚನೆಯಿಂದ ಕರ್ನಾಟಕಕ್ಕೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್

 

ಬೆಂಗಳೂರು,ಜು.7-ಕಾವೇರಿ ಪ್ರಾಧಿಕಾರದ ರಚನೆಯಿಂದ ಕರ್ನಾಟಕಕ್ಕೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ವತಿಯಿಂದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇಂದು ಕರಾಳ ದಿನಾಚರಣೆ ಆಚರಿಸಲಾಯಿತು.
ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಕೆ.ಆರ್.ಕುಮಾರ್, ಶಿವರಾಮೇಗೌಡ, ಪ್ರವೀಣ್‍ಕುಮಾರ್ ಶೆಟ್ಟಿ, ಮಂಜುನಾಥ್ ದೇವು, ಗಿರೀಶ್ ಗೌಡ ಮುಂತಾದವರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ ಪ್ರಾಧಿಕಾರ ರಚನೆಯಾಗಿರುವುದನ್ನು ವಿರೋಧಿಸಿದರು.
ಪ್ರಾಧಿಕಾರದಿಂದ ಕರ್ನಾಟಕಕ್ಕೆ ತೀವ್ರ ಅನ್ಯಾಯವಾಗುತ್ತದೆ. ಕಾವೇರಿ ಜಲಾನಯನದ ಎಲ್ಲ ಪ್ರದೇಶದ ಎಲ್ಲ ಅಣೆಕಟ್ಟುಗಳನ್ನು ಕೇಂದ್ರಕ್ಕೆ ಗಿರವಿ ಇಡುವಂತೆ ಪರಿಸ್ಥಿತಿ ನಿರ್ಮಾಣವಾಗುತ್ತದೆ.
ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಪ್ರಾದಿಕಾರವನ್ನು ಒಪ್ಪಬಾರದು. ಈ ಸಂಬಂಧ ಕಾನೂನು ಹೋರಾಟವನ್ನು ತೀವ್ರಗೊಳಿಸಬೇಕು.ಪ್ರಾಧಿಕಾರ ರಚನೆಯಿಂದ ಮೇಕೆದಾಟು ಕೈ ತಪ್ಪುತ್ತದೆ.ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಉಂಟಾಗುತ್ತದೆ.
ಈ ಯಾವುದರ ಬಗ್ಗೆಯೂ ರಾಜ್ಯಪಾಲರ ಭಾಷಣದಲ್ಲಾಗಲಿ, ಬಜೆಟ್‍ನಲ್ಲಿ ಪ್ರಸ್ತಾಪ ಇಲ್ಲದಿರುವುದು ದುರದೃಷ್ಟಕರ ಎಂದು ವಾಟಾಳ್ ವಿಷಾದಿಸಿದರು.ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡಿಸಿರುವ ಬಜೆಟ್‍ನಲ್ಲಿ ಉತ್ತರ ಕರ್ನಾಟಕಕ್ಕೆ ತೀವ್ರ ಅನ್ಯಾಯವಾಗಿದೆ.ಉತ್ತರ ಕರ್ನಾಟಕದ ಭಾಗದವರೊಬ್ಬರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಒತ್ತಾಯ ಮಾಡಲಾಗಿತ್ತು. ಆದರೆ ಕಡೆಗಣಿಸಲಾಗಿದೆ ಎಂದು ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ