
ದಕ್ಷಿಣ ಕನ್ನಡ,ಜು.8- ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ಮೇಲೆ ಎರಡು ಮರಗಳು ಬಿದ್ದಿದ್ದು, ಅದೃಷ್ಟ ವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ಮಂಜುನಾಥಸ್ವಾಮಿ ದರ್ಶನ ಮಾಡಲೆಂದು ಬೆಂಗಳೂರಿನಿಂದ ನಾಲ್ವರು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಧರ್ಮಸ್ಥಳದಲ್ಲಿ ಕಾರಿನ ಮೇಲೆ ಎರಡು ಮರಗಳು ಉರುಳಿಬಿದ್ದಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ವೇಳೆ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡು ಸಾರ್ವಜನಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.