ದಾವಣಗೆರೆ ಜು.8- ನಗರದ ಜನತೆಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತಸೌಕರ್ಯಗಳ ಪೂರೈಕೆಗೆ ಆದ್ಯತೆ ನೀಡಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ ಅವರಿಗೆ ಶಾಸಕ ಎಸ್.ಎ.ರವೀಂದ್ರನಾಥ್ ತಾಕೀತು ಮಾಡಿದರು.
ಇಲ್ಲಿನ ಮಹಾನಗರ ಪಾಲಿಕೆ ಕಚೇರಿಯಲ್ಲಿ ಆಯುಕ್ತರನ್ನು ಭೇಟಿ ಮಾಡಿದ ಶಾಸಕರು, ಪಾಲಿಕೆ ವ್ಯಾಪ್ತಿಯ ಜನತೆಗೆ ಕನಿಷ್ಟ ನಾಗರಿಕ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಸಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು. ಜನತೆಗೆ ಸಮರ್ಪಕವಾಗಿ ಶುದ್ದವಾದ ಕುಡಿಯುವ ನೀರು ಕಾಲಕಾಲಕ್ಕೆ ಸರಬಾರಜು ಆಗುತ್ತಿಲ್ಲ ಜೊತೆಗೆ ಸ್ವಚ್ಛತಾ ಕಾರ್ಯ ನಡೆಯುತ್ತಿಲ್ಲ ಎಂದು ಸಾರ್ವಜನಿಕರಿಂದ ದೂರುಗಳು ಬರುತ್ತಿದೆ. ಅದಕ್ಕೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಮಾಡುವಂತೆ ತಿಳಿಸಿದರು. ಸ್ಮಾರ್ಟ್ ಸಿಟಿ ಕಾಮಗಾರಿಗಳು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿಲ್ಲ. ಪೂರಕ ಕ್ರಮಕ್ಕೆ ಒತ್ತಾಯಿಸಿದ ಶಾಸಕರು, ಈ ಸಂಬಂಧ ಸಭೆ ಕರೆಯಬೇಕೆಂದು ಒತ್ತಾಯಿಸಿದರು. ಜನತೆಗೆ 10ರಿಂದ 15 ದಿನಗಳಿಗೊಮ್ಮೆ ನೀರು ಸರಬರಾಜು ಆಗುತ್ತಿದೆ. ಆದ್ದರಿಂದ ಕನಿಷ್ಠ 5ರಿಂದ 6 ದಿನಕ್ಕೊಮ್ಮೆ ನೀರು ಕೊಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಭದ್ರ ನಾಲೆಯಲ್ಲಿ ನೀರು ಬಂದಾಗ ವಾರಕ್ಕೆ ಎರಡು ದಿನ ನೀರು ಕೊಡಬೇಕು ಹಾಗೂ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಇಂಜಿನಿಯರ್ ಮತ್ತು ಎಸ್ಸಿ ಅಧಿಕಾರಿಗಳು, ಪಾಲಿಕೆ ಸದಸ್ಯ ಡಿ.ಕೆ.ಕುಮಾರ್, ಬಿಜೆಪಿ ಮುಖಂಡರಾದ ಎಚ್.ಆರ್.ಲಿಂಗರಾಜು, ಶಿವರಾಜ್ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.