
ಮಂಡ್ಯ,ಜು.8-ವಿಳಾಸ ಕೇಳುವ ನೆಪದಲ್ಲಿ ಬೈಕ್ನಲ್ಲಿ ಬಂದ ಮೂವರು ಯುವಕರು ಮಹಿಳೆಯ ಒಂದು ಲಕ್ಷ ಮೌಲ್ಯದ ಅವಲಕ್ಕಿ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕೆ.ಎಂ.ದೊಡ್ಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಗುರುದೇವರಹಳ್ಳಿ ನಿವಾಸಿ ತಾಯಮ್ಮ ಎಂಬುವರು ಮನೆ ಮುಂದೆ ನಿಂತಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ಮೂವರು ಯುವಕರು ಮನೆಯ ವಿಳಾಸ ಕೇಳಿ ಅವರ ಗಮನವನ್ನು ಬೇರೆಡೆ ಸೆಳೆದಿದ್ದು , ಆಗ ತಾಯಮ್ಮನ ಕುತ್ತಿಗೆಯಲ್ಲಿದ್ದ ಒಂದು ಲಕ್ಷ ಮೌಲ್ಯದ ಅವಲಕ್ಕಿ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದಾರೆ. ಕೂಡಲೇ ತಾಯಮ್ಮ ಕೂಗಿಕೊಂಡರೂ ಗ್ರಾಮಸ್ಥರು ಬರುವಷ್ಟರಲ್ಲಿ ಕಳ್ಳರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಎಸ್ಐ ಅಯ್ಯನಗೌಡ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೆ.ಎಂ.ದೊಡ್ಡಿಯಲ್ಲಿ ಪ್ರಕರಣ ದಾಖಲಾಗಿದೆ.